ಸ್ಯಾಂಡಲ್ ವುಡ್

ಪ್ರಮೋದ್ ನಟನೆಯ ‘ಬಾಂಡ್ ರವಿ’ ಬಿಡುಗಡೆಗೆ ಡೇಟ್ ಫಿಕ್ಸ್ – ಡಿಸೆಂಬರ್ 9ಕ್ಕೆ ಸಿನಿಮಾ ರಿಲೀಸ್

‘ರತ್ನನ್ ಪ್ರಪಂಚ’ ಚಿತ್ರದಲ್ಲಿ ಉಡಾಳ್ ಬಾಬು ಪಾತ್ರದ ಮೂಲಕ ಖ್ಯಾತಿ ಗಳಿಸಿರುವ ಪ್ರಮೋದ್ ‘ಬಾಂಡ್ ರವಿ’ಯಾಗಿ ಹೊಸ ಅವತಾರ ತಾಳಿದ್ದಾರೆ. ಪ್ರಮೋದ್ ಸಿನಿ ಕೆರಿಯರ್ ನ ಬಹು ನಿರೀಕ್ಷಿತ ಚಿತ್ರ ಇದಾಗಿದೆ. ಮಾಸ್ ಟೀಸರ್ ಹಾಗೂ ಹಾಡಿನ ಮೂಲಕ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ಡಿಸೆಂಬರ್ 9ರಂದು ‘ಬಾಂಡ್ ರವಿ’ ಪ್ರೇಕ್ಷಕರನ್ನು ರಂಜಿಸಲು ಚಿತ್ರಮಂದಿರಕ್ಕೆ ಎಂಟ್ರಿ ಕೊಡ್ತಿದ್ದಾನೆ.

‘ಗೀತಾ ಬ್ಯಾಂಗಲ್ ಸ್ಟೋರ್’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕನಾಗಿ ಎಂಟ್ರಿ ಕೊಟ್ಟ ಪ್ರಮೋದ್ ‘ಮತ್ತೆ ಉದ್ಭವ’, ‘ಪ್ರೀಮಿಯರ್ ಪದ್ಮಿನಿ’ ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ. ಬಾಂಡ್ ರವಿ ಮೂಲಕ ಮಾಸ್ ಹೀರೋ ಆಗಿ ಮಿಂಚಲು ಸಜ್ಜಾಗಿದ್ದಾರೆ. ಆಕ್ಷನ್ ಲವ್ ಸ್ಟೋರಿ ಒಳಗೊಂಡ ಈ ಚಿತ್ರಕ್ಕೆ ಪ್ರಜ್ವಲ್ ಎಸ್.ಪಿ ಆಕ್ಷನ್ ಕಟ್ ಹೇಳಿದ್ದಾರೆ. ಪ್ರೇಕ್ಷಕರಲ್ಲಿ ಬಹಳ ನಿರೀಕ್ಷೆ ಮೂಡಿಸಿರುವ ಈ ಸಿನಿಮಾ ಡಿಸೆಂಬರ್ 9ರಂದು ತೆರೆ ಕಾಣುತ್ತಿದೆ.

ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಗಮನ ಸೆಳೆದಿವೆ. ವಿ ನಾಗೇಂದ್ರ ಪ್ರಸಾದ್ ಸಾಹಿತ್ಯದ ವಿಜಯ ಪ್ರಕಾಶ್ ದನಿಯಾಗಿರುವ ‘ಮಜ ಮಜ ಮಾಡು ಬಾ’, ಜಯಂತ್ ಕಾಯ್ಕಿಣಿ ಸಾಹಿತ್ಯದ ಸೋನು ನಿಗಂ ದನಿಯಾಗಿರುವ ರೋಮ್ಯಾಂಟಿಕ್ ಸಾಂಗ್ ‘ಸಹಜ ಸಖಿ’ ಹಾಡುಗಳು ಬಿಡುಗಡೆಯಾಗಿ ಕೇಳುಗರ ಮನಗೆದ್ದಿವೆ.

ನರಸಿಂಹಮೂರ್ತಿ. ವಿ ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ. ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದು, ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್. ರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Related Articles

Back to top button

Looks like your ad blocker is on.

We rely on ads to bring you our intuitive articles & journalism. Please allow ads & support KannadaTimes.com.