ಹಿಂದೂ ಧರ್ಮವು ವರ್ಷದಾದ್ಯಂತ ಅನೇಕ ಹಬ್ಬಗಳನ್ನು ಹೊಂದಿದೆ. ಹಿಂದೂ ಪಂಚಾಂಗವು ಅವುಗಳ ದಿನಾಂಕಗಳನ್ನು ಗೊತ್ತುಮಾಡುತ್ತದೆ. ಹಬ್ಬಗಳು ವಿಶಿಷ್ಟವಾಗಿ, ಹಲವುವೇಳೆ ಋತುಗಳ ಬದಲಾವಣೆಗಳೊಂದಿಗೆ ತಾಳೆಹೊಂದುವ, ಹಿಂದೂ ಪುರಾಣದ ಘಟನೆಗಳನ್ನು ಆಚರಿಸುತ್ತವೆ. ಮುಖ್ಯವಾಗಿ ನಿರ್ದಿಷ್ಟ ಪಂಥಗಳಿಂದ ಅಥವಾ ಭಾರತೀಯ ಉಪಖಂಡದ ನಿಶ್ಚಿತ ಪ್ರದೇಶಗಳಲ್ಲಿ ಆಚರಿಸಲಾಗುವ ಹಬ್ಬಗಳಿವೆ. ಮಹಾ ಶಿವರಾತ್ರಿ, ಹೋಳಿ, ರಾಮ ನವಮಿ, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದಸರಾ, ದುರ್ಗಾ ಪೂಜೆ, ಮತ್ತು ದೀಪಾವಳಿ, ವ್ಯಾಪಕವಾಗಿ ಆಚರಿಸಲಾಗುವ ಕೆಲವು ಹಿಂದೂ ಹಬ್ಬಗಳು.
ಹಿಂದೂ ಆಚರಣೆಗಳು ಸಾಮಾನ್ಯವಾಗಿ ದೇವರ ಅರಿವನ್ನು ಅರಸುವ ಮತ್ತು ಕೆಲವೊಮ್ಮೆ ದೇವತೆಗಳಿಂದ ಆಶೀರ್ವಾದಗಳನ್ನು ಬೇಡುವುದನ್ನು ಸಹ ಒಳಗೊಂಡಿರುತ್ತವೆ. ಹಾಗಾಗಿ, ಹಿಂದೂ ಧರ್ಮವು ದಿನನಿತ್ಯದ ಜೀವನದ ನಡುವೆಯೂ ಒಬ್ಬರಿಗೆ ದೈವತ್ವದ ಬಗ್ಗೆ ಚಿಂತಿಸಲು ನೆರವಾಗುವ ಉದ್ದೇಶದಿಂದ ಅನೇಕ ಆಚರಣೆಗಳನ್ನು ವೃದ್ಧಿಪಡಿಸಿದೆ. ಹಿಂದೂಗಳು, ಮನೆಯಲ್ಲಿ ಅಥವಾ ದೇವಸ್ಥಾನದಲ್ಲಿ, ಪೂಜೆಯಲ್ಲಿ (ಆರಾಧನೆ ಅಥವಾ ಗೌರವ) ಭಾಗವಹಿಸಬಹುದು.
ಮನೆಯಲ್ಲಿ, ಹಿಂದೂಗಳು ಹಲವುವೇಳೆ ತಮ್ಮ ಇಷ್ಟದೇವತೆಗಳಿಗೆ ಸಮರ್ಪಿತವಾದ ಮೂರ್ತಿಗಳಿರುವ ಒಂದು ದೇವರಮನೆಯನ್ನು ನಿರ್ಮಿಸುತ್ತಾರೆ. ದೇವಸ್ಥಾನಗಳು ಸಾಮಾನ್ಯವಾಗಿ ಒಬ್ಬ ಮುಖ್ಯ ದೇವತೆಗೆ, ಜೊತೆಗೆ ಸಂಬಂಧಿತ ಅಪ್ರಧಾನ ದೇವತೆಗಳಿಗೆ, ಸಮರ್ಪಿತವಾಗಿರುತ್ತವೆಯಾದರೂ ಕೆಲವು ದೇವಸ್ಥಾನಗಳು ಅನೇಕ ದೇವತೆಗಳನ್ನು ಹೊಂದಿರುತ್ತವೆ. ದೇವಸ್ಥಾನಗಳಿಗೆ ಭೇಟಿ ನೀಡುವುದು ಅನಿವಾರ್ಯವಲ್ಲ, ಮತ್ತು ಹಲವರು ಧಾರ್ಮಿಕ ಹಬ್ಬಗಳ ಅವಧಿಯಲ್ಲಿ ಮಾತ್ರ ದೇವಸ್ಥಾನಗಳಿಗೆ ಭೇಟಿಕೊಡುತ್ತಾರೆ. ಹಿಂದೂಗಳು ತಮ್ಮ ಪೂಜೆಯನ್ನು ಮೂರ್ತಿಗಳ ಮೂಲಕ ಮಾಡುತ್ತಾರೆ. ಮೂರ್ತಿಯು ಆರಾಧಕ ಮತ್ತು ದೇವರ ನಡುವೆ ಒಂದು ಪ್ರತ್ಯಕ್ಷ ಸಂಪರ್ಕವಾಗಿ ಕೆಲಸಮಾಡುತ್ತದೆ. ದೇವರು ಸರ್ವಾಂತರ್ಯಾಮಿಯಾಗಿರುವುದರಿಂದ ಮೂರ್ತಿಯನ್ನು ಹಲವುವೇಳೆ ದೇವರ ಅಭಿವ್ಯಕ್ತಿಯೆಂದು ಪರಿಗಣಿಸಲಾಗುತ್ತದೆ. ಮೂರ್ತಿಯನ್ನು ಬರಿಯ ಕಲ್ಲು ಅಥವಾ ಕಟ್ಟಿಗೆಯಾಗಿ ಭಾವಿಸದೇ ದೈವತ್ವದ ಪ್ರಕಟವಾದ ರೂಪವಾಗಿ ಭಾವಿಸಬೇಕೆಂದು ಪದ್ಮ ಪುರಾಣವು ಹೇಳುತ್ತದೆ.
ಕೃಪೆ : https://www.facebook.com/VRHindus