ನಾಯಕ-ನಾಯಕಿ

‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರಕ್ಕೆ ಎಂಟ್ರಿ ಕೊಟ್ಟ ರಂಗಿತರಂಗ ಬೆಡಗಿ ರಾಧಿಕಾ ನಾರಾಯಣ್

ದೂದ್ ಪೇಡ ದಿಗಂತ್ ಅಭಿನಯದ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ಚಿತ್ರೀಕರಣ ಭರದಿಂದ ನಡೆಯುತ್ತಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚೊಚ್ಚಲ ಸಿನಿಮಾ ಇದಾಗಿದೆ. ಇತ್ತೀಚೆಗೆ ಸಿನಿಮಾ ತಂಡವನ್ನು ನಟಿ ನಿಧಿ ಸುಬ್ಬಯ್ಯ ಸೇರಿಕೊಂಡಿದ್ರು. ಇದೀಗ ಮತ್ತೊಂದು ಲೇಟೆಸ್ಟ್ ಸುದ್ದಿ ಹೊರಬಿದ್ದಿದೆ. ಮತ್ತೊಬ್ಬ ಸ್ಟಾರ್ ನಟಿ ಈ ಚಿತ್ರತಂಡವನ್ನು ಸೇರಿಕೊಂಡಿದ್ದಾರೆ.

ರಂಗಿತರಂಗ ಸಿನಿಮಾ ಮೂಲಕ ಖ್ಯಾತಿಗಳಿಸಿರುವ ನಟಿ ರಾಧಿಕಾ ನಾರಾಯಣ್ ‘ಎಡಗೈ ಅಪಘಾತಕ್ಕೆ ಕಾರಣ’ ಸಿನಿಮಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಚಿತ್ರದ ಪ್ರಮುಖ ಪಾತ್ರದಲ್ಲಿ ರಾಧಿಕಾ ನಾರಾಯಣ್ ನಿರ್ವಹಿಸಲಿದ್ದು, ಈಗಾಗಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಮೂಲಕ ಸಿನಿಮಾ ಬಗೆಗಿನ ಕುತೂಹಲವನ್ನು ದುಪ್ಪಟ್ಟು ಮಾಡಿದೆ ಚಿತ್ರತಂಡ.

ಎಡಗೈ ಬಳಸುವವರ ಸಮಸ್ಯೆಗಳ ಸುತ್ತ ಹೆಣೆದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಬ್ಲ್ಯಾಕ್ ಕಾಮಿಡಿ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಸಿನಿಮಾದಲ್ಲಿದೆ. ಸಮರ್ಥ್ ಬಿ ಕಡಕೊಳ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ದಿಗಂತ್ ಜೋಡಿಯಾಗಿ ಧನು ಹರ್ಷ ನಟಿಸುತ್ತಿದ್ದಾರೆ.

ಹೈಫನ್ ಪಿಕ್ಚರ್ಸ್ ಬ್ಯಾನರ್ ನಡಿ ಗುರುದತ್ ಗಾಣಿಗ ಹಾಗೂ ನಿರ್ದೇಶಕ ಸಮರ್ಥ್ ಬಿ ಕಡಕೊಳ್ ಚಿತ್ರವನ್ನು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಶೇಕಡಾ 80ರಷ್ಟು ಚಿತ್ರೀಕರಣ ಕಂಪ್ಲೀಟ್ ಆಗಿದ್ದು, ಭಜರಂಗಿ ಲೋಕಿ, ಕೃಷ್ಣ ಹೆಬ್ಬಾಳ್ ಚಿತ್ರದ ತಾರಾಗಣದಲ್ಲಿದ್ದಾರೆ. ಅಭಿಮನ್ಯು ಸದಾನಂದ್ ಕ್ಯಾಮೆರಾ ವರ್ಕ್, ರಾಹುಲ್ ವಿ ಪಾರ್ವತಿಕರ್ ಹಾಗೂ ಶ್ರೀಪಾದ್ ಜೋಶಿ ಸಂಭಾಷಣೆ ಸಿನಿಮಾಗಿದೆ.

Related Articles

Back to top button

Looks like your ad blocker is on.

We rely on ads to bring you our intuitive articles & journalism. Please allow ads & support KannadaTimes.com.