ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ ಅಭಿನಯಿಸ್ತಿದ್ದು, ಈಗಾಗಲೇ ರೀಷ್ಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.
ರೀಷ್ಮಾ, ಸದಾ ಹಸನ್ಮುಖಿಯಾಗಿರುವ ಪಾತ್ರದಲ್ಲಿ ನಟಿಸ್ತಿದ್ದು, ನಾಯಕನ ಪಯಣದಲ್ಲಿ ನಾಯಕಿ ಹೇಗೆ ಬೆಂಬಲವಾಗಿ ನಿಲ್ಲುತ್ತಾಳೆ ಅನ್ನೋದನ್ನು ಸಿನಿಮಾದಲ್ಲಿ ನೋಡಬಹುದು. ಪಕ್ಕ ಔಟ್ ಅಂಡ್ ಟ್ ಕಮರ್ಷಿಯಲ್ ಆಕ್ಷನ್ ಸಿನಿಮಾವಾಗಿರುವ ವಾಮನದಲ್ಲಿ ಒಂದೊಳ್ಳೆ ಲವ್ ಸ್ಟೋರಿ ಕೂಡ ಇದೆ. ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿಬರ್ತಿರುವ ಸಿನಿಮಾವನ್ನು ಚೇತನ್ ಕುಮಾರ್ ರ್ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ ನಡಿ ನಿರ್ಮಾಣ ಮಾಡಿದ್ದಾರೆ. ಈಗಾಗ್ಲೇ ರಿಲೀಸ್ ಆಗಿರುವ ಧನ್ವೀರ್ ಫಸ್ಟ್ ಲುಕ್ ಹಾಗೂ ಮೇಕಿಂಗ್ ಝಲಕ್ ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಖತ್ ಮಾಸ್ ಅವತಾರದಲ್ಲಿ ಶೋಕ್ದಾರ್ ಮಿಂಚಿದ್ದು, ಶೀರ್ಘದಲ್ಲಿ ಚಿತ್ರತಂಡ ಮತ್ತೊಂದು ಅಪ್ ಡೇಟ್ ಗೆ ಸಜ್ಜಾಗ್ತಿದೆ.