ಸಂಗೀತ ಸಮಯ

ತ್ರಿಧಾ ಮ್ಯೂಸಿಕ್ ಅಕಾಡೆಮಿಯ 2ನೇ ಘಟಕ ಉದ್ಘಾಟನೆ

ಬೆಂಗಳೂರು: ವಿಜಯನಗರದಲ್ಲಿ ತ್ರಿಧಾ ಮ್ಯೂಸಿಕ್ ಅಕಾಡೆಮಿಯ ಎರಡನೇ ಘಟಕದ ಉದ್ಘಾಟನಾ ಸಮಾರಂಭವನ್ನು ವಿಜಯನಗರದಲ್ಲಿ ಆಯೋಜಿಸಲಾಗಿತ್ತು. ಸಂಗೀತಾಭಿಮಾನಿಗಳ ಸಮ್ಮುಖದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಿ ಅಕಾಡೆಮಿಯ ಹೊಸ ಪ್ರಯತ್ನಕ್ಕೆ ಶುಭ ಕೋರಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಟ ಹಾಗೂ ಗಾಯಕ ಭರತ್ ನಾಯಕ್ ಮತ್ತು ‘ಸ ರಿ ಗ ಮ ಪ’ ಸೀಸನ್–20ರ ವಿಜೇತ, ಹಿನ್ನಲೆ ಗಾಯಕ ದರ್ಶನ ನಾರಾಯಣ ಉಪಸ್ಥಿತರಿದ್ದು, ರಿಬ್ಬನ್ ಕಟ್ ಮಾಡುವ ಮೂಲಕ ಘಟಕವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಸಂಗೀತ ಶಿಕ್ಷಣದ ಮಹತ್ವವನ್ನು ಒತ್ತಿ ಹೇಳಿ, ಯುವ ಪ್ರತಿಭೆಗಳಿಗೆ ಇಂತಹ ವೇದಿಕೆಗಳು ಅಗತ್ಯವೆಂದು ಅಭಿಪ್ರಾಯಪಟ್ಟರು.

ತ್ರಿಧಾ ಮ್ಯೂಸಿಕ್ ಅಕಾಡೆಮಿಯ ಸಂಸ್ಥಾಪಕರಾದ ರಕ್ಷಿತಾ ಭಾಸ್ಕರ್ ಸಂಸ್ಥೆಯ ಉದ್ದೇಶ ಹಾಗೂ ಭವಿಷ್ಯದ ಯೋಜನೆಗಳನ್ನು ವಿವರಿಸಿ, ಸಂಗೀತ ಕ್ಷೇತ್ರದಲ್ಲಿ ಇನ್ನಷ್ಟು ವಿದ್ಯಾರ್ಥಿಗಳನ್ನು ಬೆಳೆಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಖ್ಯಾತ ಹಿನ್ನಲೆ ಗಾಯಕರಾದ  ಅಖಿಲ ಪಜಿಮಣ್ಣು, ಅರುಂಧತಿ ಹೆಗಡೆ,

ಐಶ್ವರ್ಯ ಮಣಿಕರ್ಣಿಕೆ,  ಕಿರುತೆರೆ ನಟ ಅಥರ್ವ, ಸಂಗೀತಾಸಕ್ತರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Related Articles

Back to top button