ಸೃಜನ ಸಾಂಸ್ಕೃತಿಕ ಸಮೂಹದ 22ನೇ ಗುರುವಂದನಾ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು 4 ಫೆಬ್ರವರಿ 2024ರಂದು, ಸಂಜೆ 4:30ಗಂಟೆಗೆ, ಹೆಚ್ ಎನ್ ಕಲಾಕ್ಷೇತ್ರ, ನ್ಯಾಷನಲ್ ಕಾಲೇಜು, ಜಯನಗರ, ಬೆಂಗಳೂರು, ಇಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾದ ಶ್ರೀ ಭಾಸ್ಕರ್ ರಾವ್ ರವರು ಮತ್ತು ಖ್ಯಾತ ಸಾಹಿತಿಗಳಾದ ಶ್ರೀ ಜಯಂತ್ ಕಾಯ್ಕಿಣಿರವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸೃಜನ ಸಂಗೀತ ಶಾಲೆಯಲ್ಲಿ ಸುಗಮ ಸಂಗೀತಾಭ್ಯಾಸ ಮಾಡುತ್ತಾ, ಎಸೆಸೆಲ್ಸಿ ಮತ್ತು ದ್ವಿತೀಯ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಸಾಧನೆ ಮಾಡಿದ 19 ಅರ್ಹ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಜೊತೆಗೆ, ಗೀತ ಗಾಯನ, ನೃತ್ಯ, ಸಮೂಹ ಗಾಯನ ಮೊದಲಾದ ಹಲವಾರು ಮನರಂಜನಾ ಕಾರ್ಯಕ್ರಮಗಳೂ ಸಹ ನಡೆಯಲಿದೆ. ಮುಖ್ಯ ಅತಿಥಿಗಳು ಪುರಸ್ಕೃತರು ಮತ್ತು ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿ ಮಾರ್ಗದರ್ಶನ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕೃತರು, ಸೃಜನ ಸಂಗೀತ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು YouTubeನಲ್ಲಿ ನೇರ ಪ್ರಸಾರ ಮಾಡುವ ವ್ಯವಸ್ಥೆ ಮಾಡಲಾಗಿದ್ದು, ಪ್ರಪಂಚದಾದ್ಯಂತ ಸಾವಿರಾರು ಜನರು ವೀಕ್ಷಿಸುವ ನಿರೀಕ್ಷೆಯಿದೆ.