ಸಂಗೀತ

ರಾಜರಾಜೇಶ್ವರಿನಗರದಲ್ಲಿ ಸ್ವರಮೇಧಾ ಮ್ಯೂಸಿಕ್ ಫೆಸ್ಟಿವಲ್ ೨೦೧೮-೧೯

ಬೆಂಗಳೂರು : ನಗರದ ರಾಜರಾಜೇಶ್ವರಿನಗರದಲ್ಲಿರುವ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ ೨೦೧೮-೧೯ನೆಯ ಶೈಕ್ಷಣಿಕ ವರ್ಷದ ವಾರ್ಷಿಕೋತ್ಸವವನ್ನು ಇದೇ ಭಾನುವಾರ ಜನವರಿ ಇಪ್ಪತ್ತೇಳರಂದು ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್ ಟೌನ್ ಶಿಪ್ ನ ಗುಡ್ಡದ ಮೇಲಿರುವ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕಾಲೇಜಿನ ಒಳಾಂಗಣ ಸಭಾಂಗಣದಲ್ಲಿ “ಸ್ವರಮೇಧಾ ಮ್ಯೂಸಿಕ್ ಫೆಸ್ಟಿವಲ್ ೨೦೧೮-೧೯’ ಎಂಬ ಶೀರ್ಷಿಕೆಯಡಿಯಲ್ಲಿ ನಡೆಸಲಾಗುತ್ತಿದೆ.

ಅಂದು ಮಧ್ಯಾಹ್ನ ಎರಡು ಗಂಟೆಯಿಂದ ರಾತ್ರಿ ಒಂಬತ್ತು ಗಂಟೆಯವರೆಗೆ ಒಟ್ಟು ನಾಲ್ಕು ಅವಧಿಗಳಲ್ಲಿ ಅಕಾಡೆಮಿಯ ಜ್ಯೂನಿಯರ್, ಸೀನಿಯರ್ ಹಾಗೂ ವಿದ್ವತ್ ವಿಭಾಗದ ವಿದ್ಯಾರ್ಥಿಗಳಿಂದ ಒಟ್ಟು ೫೦ ಸಂಗೀತ ಕಛೇರಿಗಳು ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲಕ ಡಾ. ಚಿನ್ಮಯ ಎಂ.ರಾವ್ ತಿಳಿಸಿದ್ದಾರೆ.

ಸಂಜೆ ೬-೩೦ಕ್ಕೆ ನಡೆಯಲಿರುವ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಅಧಿಕಾರಿ ಹಾಗೂ ಖ್ಯಾತ ಹಿನ್ನೆಲೆ ಗಾಯಕ ಡಾ.ಅನುಪ್ ದಯಾನಂದ್ ಸಾಧು, ಗೋಸೇವಕ ಮಹೇಂದ್ರ ಮುನ್ನೋತ್, ಸುಪ್ರಸಿದ್ಧ ಲೆಕ್ಕ ಪರಿಶೋಧಕ ಸಿ.ಎ ಗೋಪಾಲಕೃಷ್ಣ ಹೆಗಡೆ ಹಾಗೂ ಉದ್ಯಮಿ ರಾಜೇಶ್ ಬಾಬು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ ಸಂಸ್ಥಾಪಕ ಹಾಗೂ ಪ್ರಾಂಶುಪಾಲಕ ಡಾ. ಚಿನ್ಮಯ ಎಂ.ರಾವ್, ಅಕಾಡೆಮಿಯ ಅಧ್ಯಕ್ಷರಾದ ಲೆಕ್ಕ ಪರಿಶೋಧಕ ಸಿ.ಎ ಭರತ್ ರಾವ್ ಕೆ.ಎಸ್, ಅಕಾಡೆಮಿಯ ಗೌರವ ಸಲಹೆಗಾರರಾದ ಸಮಾಜ ಸೇವಕಿ ಲತಾ ಶ್ರೀಧರ್ ಹಾಗೂ ಉದ್ಯಮಿ ಜಗನ್ನಾಥ ಹೆಗಡೆ ಈ ಸಂದರ್ಭದಲ್ಲಿ ವೇದಿಕೆಯಲ್ಲಿರಲಿದ್ದಾರೆ.

ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿಯ ಕಿರುಪರಿಚಯ :

ಯುವ ಸಂಗೀತ ನಿರ್ದೇಶಕ ಹಾಗೂ ದಕ್ಷಿಣಾದಿ ಶಾಸ್ತ್ರೀಯ ಸಂಗೀತ ಕಲಾವಿದ ಡಾ. ಚಿನ್ಮಯ ಎಂ.ರಾವ್ ಅವರ ಪರಿಕಲ್ಪನೆಯಲ್ಲಿ ೨೦೧೫ರಲ್ಲಿ ಸಂಸ್ಥಾಪಿಸಲ್ಪಟ್ಟ ಸಂಸ್ಥೆಯೇ ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿ. ಕಳೆದ ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ವಿವಿಧ ಶಾಖೆಗಳನ್ನು ಹೊಂದಿದ್ದು ಅಲ್ಲೆಲ್ಲಾ ಸ್ವತಹ ಚಿನ್ಮಯ ಎಂ.ರಾವ್ ಅವರೇ ನೂರಾರು ವಿದ್ಯಾರ್ಥಿಗಳಿಗೆ ಸಂಗೀತ ಪಾಠವನ್ನು ಮಾಡುತ್ತಿದ್ದಾರೆ. ಸಂಸ್ಥೆಯ ಪ್ರಾಂಶುಪಾಲಕರಾಗಿ ಕರ್ನಾಟಕ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ವಿಶೇಷವಾಗಿ ಯುವಪೀಳಿಗೆಗೆ ಹಸ್ತಾಂತರಿಸುತ್ತಿದ್ದಾರೆ. ಯುವಪೀಳಿಗೆಯನ್ನು ಶಾಸ್ತ್ರೀಯ ಸಂಗೀತದ ಸಾಧನೆಯತ್ತ ಕೊಂಡೊಯ್ಯಲು ಸಂಸ್ಥೆ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ.
೨೬-೧-೨೦೧೯

Tags

Related Articles

Leave a Reply

Your email address will not be published. Required fields are marked *

Back to top button
Close

Adblock Detected

Please consider supporting us by disabling your ad blocker
Skip to toolbar