ರಂಗಭೂಮಿ (ಥಿಯೇಟರ್) ಎಂದರೆ, ಒಂದು ಪ್ರದೇಶದ, ಜನಸಮುದಾಯದ ಬದುಕಿನ ಸಾಂಸ್ಕೃತಿಕ, ರಾಜಕೀಯ, ಇತಿಹಾಸದೊಂದಿಗೆ, ಸಾಹಿತ್ಯ ಕೃತಿಯಾಗಿ , ರಂಗಮಂಚದಲ್ಲಿ ನಾಟಕವಾಗಿ, ರೂಪಕವಾಗಿ ಜನಮನಕ್ಕೆ ಹತ್ತಿರವಾದ ಕಲಾಕ್ಷೇತ್ರ. ಜಗತ್ತಿನಾದ್ಯಂತ ಅಯಾ ಜನಾಂಗ,ದೇಶ,ಪ್ರದೇಶಗಳ ರಂಗಭೂಮಿ ರೂಪುಗೊಂಡುದುದನ್ನು ನಾವು ಕಾಣಬಹುದು.
ವಿಶ್ವ ರಂಗಭೂಮಿ ದಿನ
ಇಂಟರ್ ನ್ಯಾಷನಲ್ ಥಿಯೇಟರ್ ಇನ್ ಸ್ಟಿಟ್ಯೂಟ್ ೧೯೬೧ ರಲ್ಲಿ ವ್ಯವಸ್ಥೆಗೊಳಿಸಿದ ವಿಶ್ವ ರಂಗಭೂಮಿ ಸಮಾವೇಶದಲ್ಲಿ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಆಚರಿಸಲು ನಿರ್ಧರಿಸಲಾಯಿತು. ೧೯೬೨ ರಲ್ಲಿಪ್ಯಾರಿಸ್ಸಿನಲ್ಲಿ ಅಂತಾರಾಷ್ಟ್ರೀಯ ನಾಟಕೋತ್ಸವದ ಉದ್ಘಾಟನೆಯೊಂದಿಗೆ ಮೊದಲ ವಿಶ್ವ ರಂಗಭೂಮಿ ದಿನವನ್ನು ಆಚರಿಸಲಾಯಿತು.ಅಂದಿನಿಂದ ಪ್ರತಿವರ್ಷ ಮಾರ್ಚ್ ೨೭ ರಂದು ವಿಶ್ವ ರಂಗಭೂಮಿ ದಿನ ಆಚರಿಸಲಾಗುತ್ತದೆ.”ನಮನ”
-ಕೃಪೆ : http://www.wikiwand.com/kn/ರಂಗಭೂಮಿ#/overview